ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ವತಿಯಿಂದ ನಡೆಸಿದ 2026ನೇ ಸಾಲಿನ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಪೂಜಿತಾ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಉರುವಾಲು ನಿವಾಸಿ ಶಾಂತಿ ಪ್ರಿಯ ಹಾಗೂ ರಮಾನಂದ ಇವರ ಪುತ್ರಿಯಾಗಿರುವ ಇವರುಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ.ಪ್ರಸ್ತುತ ಇವರು ವಿದ್ವಾನ್ ಸುದರ್ಶನ್ ಎಂ.ಎಲ್ ಭಟ್ ಇವರ ಶಿಷ್ಯೆಯಾದ ನೃತ್ಯ ಗುರು ವಿದುಷಿ ಡಿಂಪಲ್ ಶಿವರಾಜ್ ಇವರಲ್ಲಿ ಶ್ರೀ ಶಾರದ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.













