November 24, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ ಜಾರಿಯಾಗದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶವು ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಧರ್ಮಸ್ಥಳದ ಧನಕೀರ್ತಿ ಅರಿಗ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠವು ಈ ಆದೇಶ ಹೊರಡಿಸಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ವಿನಯ್ ಎನ್. ಅವರು ವಾದ ಮಂಡಿಸಿ, “ಪ್ರಕರಣದ 10ನೇ ಪ್ರತಿವಾದಿ ತಿಮರೋಡಿ ವಿರುದ್ಧ ಈಗಾಗಲೇ ಗಡಿಪಾರು ಆದೇಶ ಹೊರಡಿಸಲಾಗಿದೆ.

ಆದರೆ ಆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ನಡುವೆಯೂ ಗಡಿಪಾರು ಆದೇಶ ಜಾರಿಯಾಗಿಲ್ಲ” ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪ ವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದರು.

ಈ ಪ್ರತಿವಾದಿಗಳ ಪರವಾಗಿ ಸರ್ಕಾರಿ ವಕೀಲರು (ಎಜಿ) ನೋಟಿಸ್ ಸ್ವೀಕರಿಸಿದರು.ಅಲ್ಲದೆ,ಮೂರು ದಿನಗಳಲ್ಲಿ ನೋಟಿಸ್ ಜಾರಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ಸೂಚಿಸಿತು. ನೋಟಿಸ್ ಉತ್ತರಿಸಲು ಡಿಸೆಂಬರ್ 16ರ ಗಡುವು ನೀಡಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಪಡಿಸಿತು.

Related posts

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya
error: Content is protected !!