November 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೈಬರ್ ಭದ್ರತಾ ಕೌಶಲ್ಯಾಭಿವೃದ್ಧಿಗೆ ಎಸ್‌ಡಿಎಂಐಟಿ–ಶಿಲಾಸಾ ಸಂಸ್ಥೆಗಳ ಒಡಂಬಡಿಕೆ: ಉದ್ಯಮ – ಶೈಕ್ಷಣಿಕ ಸಹಯೋಗ ಬಲವರ್ಧನೆ ಹಾಗೂ ವಿದ್ಯಾರ್ಥಿಗಳ ಉದ್ಯೋಗ ಸನ್ನದ್ಧತೆಗೆ ಆದ್ಯತೆ

ಉಜಿರೆ,ದಿ.ನ.24: ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಉದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ಉಜಿರೆಯ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಸ್‌ಡಿಎಂಐಟಿ) ಮತ್ತು ಮೈಸೂರಿನ SHILASA (OPC) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಡುವೆ ಇತ್ತೀಚೆಗೆ ಒಡಂಬಡಿಕೆ (MoU) ಮಾಡಿಕೊಳ್ಳಲಾಯಿತು. ವಿಶೇಷವಾಗಿ ಸೈಬರ್ ಭದ್ರತಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಹೆಚ್ಚಿಸುವುದು ಈ ಸಹಯೋಗದ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‌ಡಿಎಂಐಟಿ ಪ್ರಾಂಶುಪಾಲರಾದ ಡಾ. ಸಂದೀಪ್ ಆರ್. ಅವರು, ವಿದ್ಯಾರ್ಥಿಗಳನ್ನು ಉದ್ಯಮ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಸಜ್ಜುಗೊಳಿಸಲು ಕೌಶಲ್ಯಾಭಿವೃದ್ಧಿ ಅತ್ಯಗತ್ಯವಾಗಿದೆ. ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕ್ಷೇತ್ರದ ಪ್ರಾಯೋಗಿಕ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಂತಹ ಸಹಯೋಗಗಳು ಮಹತ್ವದ ಪಾತ್ರ ವಹಿಸುತ್ತವೆ. ಶಿಲಾಸಾ ಸಂಸ್ಥೆಯೊಂದಿಗಿನ ಈ ಒಡಂಬಡಿಕೆಯು ವಿದ್ಯಾರ್ಥಿಗಳಿಗೆ ಉದ್ಯಮ ಆಧಾರಿತ ಕೌಶಲ್ಯಗಳನ್ನು ಪಡೆಯಲು ಉತ್ತಮ ಅವಕಾಶಗಳನ್ನು ಒದಗಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

SHILASA (OPC) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಮಲ್ಲಿಕಾರ್ಜುನ ಅವರು ಸಂಸ್ಥೆಯ ಪರವಾಗಿ ಒಡಂಬಡಿಕೆಗೆ ಸಹಿ ಹಾಕುವ ಮೂಲಕ ಎರಡೂ ಸಂಸ್ಥೆಗಳ ನಡುವಿನ ಔಪಚಾರಿಕ ಸಹಯೋಗಕ್ಕೆ ಚಾಲನೆ ನೀಡಿದರು.

ಶಿಲಾಸಾ ಸಂಸ್ಥೆಯ ಸೈಬರ್ ಭದ್ರತಾ ತಜ್ಞರಾದ ಅನಿಲ್ ಕುಮಾರ್ ಅವರು ಮಾತನಾಡಿ, ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದಲ್ಲಿ ಸೈಬರ್ ಭದ್ರತೆಯ ಮಹತ್ವ ಹೆಚ್ಚುತ್ತಿದ್ದು, ಈ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಉದ್ಯಮ ಕ್ಷೇತ್ರದ ಜ್ಞಾನವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವ ಮೂಲಕ ಪ್ರಾಯೋಗಿಕ ಕಲಿಕೆಗೆ ಉತ್ತೇಜನ ನೀಡಲಾಗುವುದು. ಪ್ರಸ್ತಾವಿತ ಸೈಬರ್ ಭದ್ರತಾ ಕೌಶಲ್ಯ ಪ್ರಯೋಗಾಲಯದ ಮೂಲಕ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಹಾಗೂ ಕಲಿಕಾ ಅವಕಾಶಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಒಡಂಬಡಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ತಾಂತ್ರಿಕ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಬಳಕೆಯಲ್ಲಿರುವ ನೂತನ ತಂತ್ರಜ್ಞಾನಗಳ ಪರಿಚಯ ದೊರೆಯಲಿದೆ. ವಿಶೇಷವಾಗಿ ಸೈಬರ್ ಭದ್ರತಾ ಕ್ಷೇತ್ರದಲ್ಲಿ ಪರಿಣತಿ ಬೆಳೆಸಿಕೊಳ್ಳಲು ಈ ಸಹಯೋಗ ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳ ತಾಂತ್ರಿಕ ಸಾಮರ್ಥ್ಯ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರು, ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಲಾಸಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.ಎಸ್‌ಡಿಎಂಐಟಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರವೀಣ್ ಅವರು ಕಾರ್ಯಕ್ರಮದ ಸಂಯೋಜನೆ ಮಾಡಿ, ಸ್ವಾಗತಿಸಿ, ವಂದಿಸಿದರು.

Related posts

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya
error: Content is protected !!