November 24, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಧ.ಮಂ.ಪದವಿ ಪೂರ್ವ ಕಾಲೇಜು : ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ ಹಣ್ಣುಹಂಪಲು, ಲೇಖನ ಸಾಮಗ್ರಿ ವಿತರಣೆ

ಉಜಿರೆ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಲಾಯಿಲ ದಯಾ ವಿಶೇಷ ಮಕ್ಕಳ ಶಾಲೆಗೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣುಹಂಪಲು ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಬೆರೆತು, ಅವರೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಳ್ಳಲಾಯಿತು.ವಿಶೇಷ ಮಕ್ಕಳಲ್ಲಿ ಸಂತೋಷ ಮೂಡಿಸುವುದು, ಅವರೊಂದಿಗೆ ಪ್ರೀತಿಯಿಂದ ಬೆರೆಯುವುದು ಹಾಗೂ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ, ಸಹಾನುಭೂತಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.

ಈ ಸಂದರ್ಭ ಶಾಲೆಯ ನಿರ್ದೇಶಕರಾದ ಫಾ. ವಿನೋದ್ ಮಸ್ಕರೇನಸ್ ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್., ಸಹ ಯೋಜನಾಧಿಕಾರಿ ಶೋಭಾ ಮತ್ತು ಹಿಂದಿ ಉಪನ್ಯಾಸಕಿ ಫ್ಲೇವಿಯಾ ಉಪಸ್ಥಿತರಿದ್ದರು.

Related posts

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಉದ್ಯೋಗಿ ದಿವ್ಯ ಎನ್. ನಿಧನ

Suddi Udaya
error: Content is protected !!