ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಅಳದಂಗಡಿ ವಲಯದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಜನ ಜಾಗೃತಿ ವಲಯ ಅಧ್ಯಕ್ಷರು ವಲಯ ಮೇಲ್ವಿಚಾರಕರು ಹಾಗೂ ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.













