November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರೂ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆಗಿರುವ ಪದ್ಮವಿಭೂಷಣ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಜನಾ ಪರಿಷತ್ತಿನ ಜಿಲ್ಲಾ ಸಂಯೋಜಕರು ವಿದ್ಯಾರ್ಥಿಗಳಿಗೆ ಪೂಜ್ಯ ಖಾವಂದರ ಜೀವನ ಪರಿಚಯವನ್ನು ಮಾಡಿಕೊಟ್ಟರು. ಅವರ ಬಾಲ್ಯ, ಸರಳ ಜೀವನ, ಸೇವಾ ಮನೋಭಾವ, ಧಾರ್ಮಿಕ ಚಿಂತನೆ ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಮನಮುಟ್ಟುವಂತೆ ವಿವರಿಸಿದರು.

ಧರ್ಮಸ್ಥಳದ ಕ್ಷೇತ್ರದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಗ್ರಾಮಾಭಿವೃದ್ಧಿ ಹಾಗೂ ಸಮಾಜ ಸೇವೆಯ ಮೂಲಕ ಅವರು ಸಲ್ಲಿಸುತ್ತಿರುವ ಅಮೂಲ್ಯ ಕೊಡುಗೆಗಳನ್ನು ತಿಳಿಸಿಕೊಟ್ಟರು. ಪೂಜ್ಯ ಖಾವಂದರ ಜೀವನಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು. ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರವೀಣ ಕಾಮತ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಸಹ ಶಿಕ್ಷಕಿ ಶ್ರೀಮತಿ ಕಸ್ತೂರಿ ನಿರೂಪಿಸಿದರು. ಅತಿಥಿಗಳ ಪರಿಚಯವನ್ನು ಗೀತಾ ಪಿ ನೆರವೇರಿಸಿ, ಸಹ ಶಿಕ್ಷಕಿ ಶ್ರೀಮತಿ ಚೇತನ ಸ್ವಾಗತಿಸಿದರು . ಸಹ ಶಿಕ್ಷಕಿ ಶ್ರೀಮತಿ ನೀತ ಕೆಎಸ್ ವಂದಿಸಿದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya
error: Content is protected !!