November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸಂಸ್ಥೆಯ ವಿಶೇಷ ಅಂಚೆಚೀಟಿಗಳನ್ನು ವಿತರಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ದೇಶಭಕ್ತಿಯ ಭಾವನೆಯನ್ನು ಬೆಳೆಸುವುದು, ಯುವಜನರಲ್ಲಿ ಸೇವಾ ಮನೋಭಾವವನ್ನು ಉತ್ತೇಜಿಸುವುದು ಹಾಗೂ ಸಮುದಾಯದ ಅಭಿವೃದ್ಧಿ ಮತ್ತು ಯುವಜನರ ಕಲ್ಯಾಣ ಚಟುವಟಿಕೆಗಳಿಗೆ ಸಹಕಾರ ಮತ್ತು ಕೊಡುಗೆಗಳನ್ನು ಸಂಗ್ರಹಿಸುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ಎನ್. ನಾಯಕ್ ಅವರ ಉಪಸ್ಥಿತಿಯಲ್ಲಿ ಗೈಡ್ ಕ್ಯಾಪ್ಟನ್‌ಗಳಾದ ನಿಶಾ ಮತ್ತು ನಿರೀಕ್ಷಾ ಡಿ.ಪಿ., ಸ್ಕೌಟ್ ಮಾಸ್ಟರ್ ಯಶ್ವಿತ್ ಹಾಗೂ ಫ್ಲಾಕ್ ಲೀಡರ್ ಸುಧಾ ಎಂ. ರಾವ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Related posts

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!