November 25, 2026
ಅಭಿನಂದನೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಉಜಿರೆ: ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ (ರಿ.), ಉಜಿರೆ ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ ಎಸ್.ಡಿ.ಎಂ. ಸಂಭ್ರಮ್ – 2026’ ಅಂತರ ಶಾಲಾ ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ನವೆಂಬರ್ 25ರಂದು ಉಜಿರೆಯ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ನೃತ್ಯ ಪ್ರದರ್ಶನ, ಕಲಾತ್ಮಕ ಅಭಿವ್ಯಕ್ತಿ ಹಾಗೂ ತಂಡದ ಸಮನ್ವಯದ ಮೂಲಕ ಮೆಚ್ಚುಗೆ ಗಳಿಸಿ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳು ಇಂತಹ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಚ್ಚಿನ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

Related posts

ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಶಶಿಧರ ಪೈ, ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ‌ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಸುಲ್ಕೇರಿ ನಾಯಿದಗುರಿ ಅಂಗನವಾಡಿ ಕೇಂದ್ರಕ್ಕೆ ಚಪ್ಪಲ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!