November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ ಸಂಘ (ರಿ.), ಬೆಳ್ತಂಗಡಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 25ರಂದು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿಯ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ರಾಮಲಿಂಗಪ್ಪ ಅವರು, ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಮೂಲಭೂತ ಜ್ಞಾನ ಹೊಂದಿರುವುದು ಅತ್ಯಗತ್ಯ. ಕಾನೂನಿನ ಅರಿವು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯುತ ಜೀವನಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಎಂ. ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಶಿಕ್ಷಣದ ಜೊತೆಗೆ ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯೂ ಅಗತ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರ ಅಲೋಶಿಯಸ್ ಎಸ್. ಲೋಬೋ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಗಳಾದ ವಕೀಲ ಸಂದೇಶ್ ಕುಮಾರ್ ಅವರು ಮಕ್ಕಳ ಹಕ್ಕುಗಳು, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಇರುವ ಕಾನೂನುಗಳು ಹಾಗೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳು ಮತ್ತು ಅವುಗಳ ವಿರುದ್ಧ ಇರುವ ಕಾನೂನು ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾನೂನಿನ ಅರಿವು ಹೊಂದುವ ಮೂಲಕ ಸಮಾಜದಲ್ಲಿ ನಡೆಯುವ ಅನ್ಯಾಯ ಮತ್ತು ದೌರ್ಜನ್ಯಗಳ ವಿರುದ್ಧ ಜಾಗೃತರಾಗುವಂತೆ ಕರೆ ನೀಡಿದರು.ಮಕ್ಕಳ ದಿನಾಚರಣೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಆಚರಿಸಲಾಗುವ ಅಂತರಾಷ್ಟ್ರೀಯ ದಿನದ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು.

ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೇಯ ನಿರೂಪಿಸಿದರು. ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ಸ್ವಾಗತಿಸಿದರು. ಕಾನೂನು ಸಾಕ್ಷರತಾ ಸಂಘದ ವಿದ್ಯಾರ್ಥಿ ಪ್ರತಿನಿಧಿ ಸುಮಾಶ್ರೀ ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ದೇವಿರಮ್ಮನ ಬೆಟ್ಟ ಹತ್ತುವ ವೇಳೆ ಕನ್ಯಾಡಿ ಗ್ರಾಮದ ಯುವಕ ಹೃದಯಾಘಾತದಿಂದ ಸಾವು

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಆರೋಹಮ್‌ 2026 ಉದ್ಘಾಟನೆ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!