November 26, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳು ಸಾಗಾಟ; ಟಿಪ್ಪರ್ ಸಹಿತ ರೂ.5.10 ಲಕ್ಷ ಮೌಲ್ಯದ ಸೊತ್ತು ವಶ

ಬೆಳ್ತಂಗಡಿ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ನವೆಂಬರ್ 23ರಂದು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಬಾಲಕೃಷ್ಣ ಎ. ಅವರು ಸಿಬ್ಬಂದಿಯೊಂದಿಗೆ ಗಸ್ತು ತಿರುಗುತ್ತಿದ್ದ ವೇಳೆ, ಮುಂಡಾಜೆ ಗ್ರಾಮದ ಕೊಡಂಗೆ ಎಂಬಲ್ಲಿ ಮೃತ್ಯುಂಜಯ ಹೊಳೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿರುವ ಬಗ್ಗೆ ಬೀಟ್ ಪೊಲೀಸರಿಂದ ಖಚಿತ ಮಾಹಿತಿ ಲಭಿಸಿತ್ತು.ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ 10.40ರ ಸುಮಾರಿಗೆ ಕೊಡಂಗೆಯ ಮಣ್ಣು ರಸ್ತೆಯಲ್ಲಿ ಬರುತ್ತಿದ್ದ ಇಚರ್ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಿದ್ದಾರೆ.

ಈ ವೇಳೆ ಚಾರ್ಮಾಡಿ ಗ್ರಾಮದ ನಿವಾಸಿ, ಚಾಲಕ ಮಹಮ್ಮದ್ ನಿಶಾದ್ (25) ಯಾವುದೇ ಪರವಾನಿಗೆ ಪಡೆಯದೆ ಹಾಗೂ ಸರ್ಕಾರಕ್ಕೆ ರಾಜಸ್ವ ಪಾವತಿಸದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ದೃಢಪಟ್ಟಿದೆ.ಪೊಲೀಸರು ರೂ.5 ಲಕ್ಷ ಮೌಲ್ಯದ ಟಿಪ್ಪರ್ ಲಾರಿ ಹಾಗೂ ಅದರಲ್ಲಿದ್ದ ರೂ.10 ಸಾವಿರ ಮೌಲ್ಯದ 2.2 ಬ್ರಾಸ್ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya
error: Content is protected !!