November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬದ ಪ್ರಯುಕ್ತ “ರಕ್ತದಾನ ಶಿಬಿರ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜು ಹಾಗೂ ಆಸ್ಪತ್ರೆ (ಎಸ್‌ಡಿಎಂ ಸೊಸೈಟಿ ಆಡಳಿತ), ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಉಜಿರೆಯ ಕೀರ್ತಿಶೇಷ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆದ ಶಿಬಿರವು “ರಕ್ತ ನೀಡಿ… ಜೀವ ಉಳಿಸಿ…” ಎಂಬ ಘೋಷವಾಕ್ಯದಡಿ ನಡೆಯಿತು. ಜೀವನವನ್ನೇ ಸೇವೆಗೆ ಮುಡಿಪಾಗಿಟ್ಟ ಹೆಗ್ಗಡೆಯವರ ಜನ್ಮದಿನವನ್ನು ರಕ್ತದಾನದಂತಹ ಉದಾತ್ತ ಕಾರ್ಯದ ಮೂಲಕ ಆಚರಿಸಲಾಯಿತು.ಗೌರವ ಅತಿಥಿಯಾಗಿ ಡಾ. ರಂಜಿತಾ ರಾವ್ ಹಾಗೂ ಮುಖ್ಯ ಅತಿಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಮಂಜು ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕಿ ಡಾ. ಶಾಲ್ಮಲಿ ಸುನಿಲ್ ಸ್ವಾಗತಿಸಿದರು. ಧರ್ಮೇಂದ್ರ ಕುಮಾರ್ ಅವರು ರಕ್ತದಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಾಯಕ ಪ್ರಾಧ್ಯಾಪಕ ಶ್ರೀ ಪರಿತೋಷ್ ವಂದಿಸಿದರು.

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ರಕ್ತ ಕೇಂದ್ರದ ಸಹಯೋಗದಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್‌ನ ಬೆಂಬಲದೊಂದಿಗೆ ಶಿಬಿರ ನಡೆಯಿತು. ಜೀವ ಉಳಿಸುವುದು, ಉತ್ತಮ ಆರೋಗ್ಯವನ್ನು ಉತ್ತೇಜಿಸುವುದು ಮತ್ತು ಆರೋಗ್ಯಕರ ಸಮಾಜ ನಿರ್ಮಿಸುವುದು ಶಿಬಿರದ ಉದ್ದೇಶವಾಗಿತ್ತು. ವಿದ್ಯಾರ್ಥಿಗಳು, ಸ್ವಯಂಸೇವಕರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಕನ್ಯಾಡಿ -2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಆಟಿಡೊಂಜಿ ದಿನ”

Suddi Udaya
error: Content is protected !!