November 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನಾಚರಣೆ ಪ್ರಯುಕ್ತ ಎರಡು ದಿನಗಳ ‘ಎಸ್.ಡಿ.ಎಂ. ಸಂಭ್ರಮ – 2026’ ಸ್ಪರ್ಧೋತ್ಸವಕ್ಕೆ ಚಾಲನೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನಾಚರಣೆಯ ಅಂಗವಾಗಿ ನ. 25ರಂದು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ನೃತ್ಯ ಹಾಗು ನಾಟಕ ಸ್ಪರ್ಧೆಗಳ ‘ಎಸ್.ಡಿ.ಎಂ. ಸಂಭ್ರಮ – 2026’ ಎರಡು ದಿನಗಳ ಸ್ಪರ್ಧೋತ್ಸವಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ ಈ ವಿನೂತನ ಸಾಂಸ್ಕೃತಿಕ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ಹೆಗ್ಗಡೆಯವರ ಸಮಾಜಮುಖಿ ಯೋಜನೆಗಳ ಕುರಿತು ಅರಿವು ಮೂಡಿಸುವ ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ ಎಂದು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಇದೇ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳ ಪರವಾಗಿ ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗಡೆಯವರಿಗೆ ಜನ್ಮದಿನದ ಶುಭಾಶಯವನ್ನು ಕೋರಿದರು. ಉದ್ಘಾಟನಾ ಸಂದರ್ಭದಲ್ಲಿ ಅತಿಥಿಗಳಾದ ಕನಸಿನ ಮನೆ ಮತ್ತು ಲಕ್ಷ್ಮೀ ಇಂಡಸ್ಟ್ರೀಸ್‌ನ ಸಂಸ್ಥೆಯ ರೇಷ್ಮಾ ಮೋಹನ್, ಉಜಿರೆಯ ಮಹಾಲಕ್ಷ್ಮೀ ಸ್ಟೋರ್ಸ್‌ನ ಪುಷ್ಪಲತಾ ಭರತ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಶೈಕ್ಷಣಿಕ ಸಂಯೋಜಕರಾದ ಶಶಿಶೇಖರ ಎನ್ ಕಾಕತ್ಕರ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪೂಜ್ಯ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ರೂಪುಗೊಂಡಿರುವ ವಾತ್ಸಲ್ಯ, ಗೆಳತಿ, ಜ್ಞಾನವಿಕಾಸ, ಸಂಪೂರ್ಣ ಸುರಕ್ಷ, ನಮ್ಮೂರು ನಮ್ಮ ಕೆರೆ, ಸುಜ್ಞಾನನಿಧಿ, ಜನಮಂಗಲ, ಜನಜಾಗೃತಿ, ನವಚೇತನ, ಶುದ್ಧಗಂಗಾ, ಪ್ರಗತಿರಕ್ಷಕವಚ ಹಾಗೂ ಜ್ಞಾನದೀಪ ಮುಂತಾದ ಜನಪರ ಯೋಜನೆಗಳ ಹೆಸರನ್ನು ನೃತ್ಯ ತಂಡಗಳಿಗೆ ನೀಡುವ ಮೂಲಕ ಯೋಜನೆಗಳನ್ನು ಪರಿಚಯಿಸಲಾಯಿತು. ಪ್ರತಿಯೊಂದು ಯೋಜನೆಯ ಉದ್ದೇಶ, ಕಾರ್ಯವೈಖರಿ ಹಾಗೂ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಗಳನ್ನು ಅಂಕಿಅಂಶಗಳು ಮತ್ತು ಮಾಹಿತಿಗಳ ಮೂಲಕ ಪ್ರಸ್ತುತಪಡಿಸಲಾಯಿತು.ಕಾರ್ಯಕ್ರಮದಲ್ಲಿ ವಿವಿಧ ಎಸ್.ಡಿ.ಎಂ ಸಂಸ್ಥೆಯ ಮುಖ್ಯಸ್ಥರು, ಸಿಬ್ಬಂದಿಗಳು, ಊರಿನ ಗಣ್ಯರು, ಶಿಕ್ಷಕರು, ಪೋಷಕರು, ಮುಖ್ಯಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉಜಿರೆಯ ಎಸ್. ಡಿ. ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮಿ ಎನ್, ವಿದ್ಯಾರ್ಥಿಗಳಾ ಅಕ್ಷರ ಹಳೆಮನೆ ನೀರಜಾ ವರೇಣ್ಯ ಹಾಗೂ ನಾಯಕ್, ಶಿಕ್ಷಕಿ ಶಶಿಪ್ರಭ ಮತ್ತು ಸುಧಾಶ್ರಿ ನಿರ್ವಹಿಸಿದರು. ಎಸ್.ಡಿ.ಎಂ ಕಲಾ ಕೇಂದ್ರ ಸಂಯೋಜಕ ತೃಪ್ತ ಕುಮಾರ್ ಜೈನ್ ಹಾಗು ಸಾರ್ವಜನಿಕ ಸಂಪರ್ಕ ಮತ್ತು ಸಮೂಹ ಮಾಧ್ಯಮಗಳ ಸಂಯೋಜಕ ಅರವಿಂದ ಕಾರ್ಯಕ್ರಮವನ್ನು ಸಂಯೋಜಿಸಿದರು. 14 ಶಾಲೆಗಳು ಸಾಂಸ್ಕೃತಿಕ ಸ್ಪರ್ಧೋತ್ಸವದಲ್ಲಿ ಭಾಗಿ : ಮೊದಲನೆಯ ದಿನದ ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ), ಎಸ್.ಡಿ.ಎಂ. ಇಂಗ್ಲಿಷ್ ಮೀಡಿಯಂ ಶಾಲೆ, ಬೆಳ್ತಂಗಡಿ, ಎಸ್.ಡಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಉಜಿರೆ, ಎಸ್.ಡಿ.ಎಂ. ಸೆಕೆಂಡರಿ ಶಾಲೆ, ಉಜಿರೆ, ಎಸ್.ಡಿ.ಎಂ. ಎ.ಎಚ್.ಎಸ್. ಶಾಲೆ, ಪೆರಿಂಜೆ, ಎಸ್.ಡಿ.ಎಂ. ಇಂಗ್ಲಿಷ್ ಮೀಡಿಯಂ ಶಾಲೆ ಧರ್ಮಸ್ಥಳ, ಎಸ್.ಡಿ. ಎಂ. ಅನುದಾನಿತ ಪ್ರೌಢಶಾಲೆ, ಧರ್ಮಸ್ಥಳ, ಎಸ್.ಡಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ, ಎಸ್.ಡಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುದುವೆಟ್ಟು, ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾಂಚನ, ವೆಂಕಟ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆ ಕಾಂಚನ,ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು, ಎಸ್.ಡಿ.ಎಂ. ಪ್ರೌಢಶಾಲೆ, ಬೆಳಾಲು ಮತ್ತು ಎಸ್.ಡಿ.ಎಂ. ಇಂಗ್ಲಿಷ್ ಮೀಡಿಯಂ ಶಾಲೆ (CBSE), ಉಜಿರೆ ಭಾಗಿಯಾಗಿದ್ದರು.

Related posts

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!