November 26, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

ಉಜಿರೆ: “ಡಾ. ಡಿ ವೀರೇಂದ್ರ ಹೆಗ್ಗಡೆಯವರ ವ್ಯಕ್ತಿತ್ವದಿಂದ ಅನೇಕ ವಿಷಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನದಲ್ಲಿಯೂ ನಾವು ಸಾಧನೆ ಮಾಡಲು ಸಾಧ್ಯ” ಎಂದು ಉಜಿರೆ ಎಸ್.ಡಿ.ಎಮ್ ವಸತಿ ಸಹಿತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮದ ಅಂಗವಾಗಿ ಆಯೋಜಿಸಿದ “ಸಂಸ್ಥಾಪಕರ ದಿನ (Founder’s Day)” ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಪೂಜ್ಯರು ನಡೆದು ಬಂದ ಹಾದಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ದಾನ ಪರಂಪರೆಯ ಕುರಿತು ಮೌಲ್ಯಾಧಾರಿತ ಮಾತುಗಳನ್ನಾಡಿದರು.

7ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಕಿ ಸುಮಾ ಶ್ರೀನಾಥ್ ಅವರು ರಚಿಸಿರುವ ಪದ್ಯದ ಗುಂಪು ಗಾಯನ, ವಿದ್ಯಾರ್ಥಿನಿಯರಿಂದ ಸಮೂಹ ನೃತ್ಯ ಆಯೋಜಿಸಲಾಗಿತ್ತು.ಪೂಜ್ಯರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ತರಗತಿವಾರು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಸ್ಕ್ರಾಪ್ ಪುಸ್ತಕ ತಯಾರಿ, ಭಿತ್ತಿ ಚಿತ್ರ ತಯಾರಿ, ಪೋಸ್ಟರ್ ತಯಾರಿ, ಶುಭಾಶಯ ಪತ್ರ ತಯಾರಿ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಇದರ ಪ್ರದರ್ಶನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ವಿದ್ಯಾರ್ಥಿಗಳಾದ ರುಷ ಮೆಹಕ್ ಹಾಗೂ ಅಧೀಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ವಂದಿಸಿದರು.

Related posts

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!