November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಸಂಭ್ರಮ 2026: ನಾಟಕ ಸ್ಪರ್ಧೆಯಲ್ಲಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ ಸ್ಥಾನ

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ ಎಸ್‌ಡಿಎಂ ಸಂಭ್ರಮ 2026 ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಉಜಿರೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ನಡೆದ ಅಂತರಶಾಲಾ ನಾಟಕ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಕರ್ಣಭಾರಂ’ ನಾಟಕವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಒಟ್ಟು ಹನ್ನೊಂದು ನಾಟಕಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅವುಗಳ ಪೈಕಿ ಕರ್ಣಭಾರಂ ನಾಟಕವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ನಾಟಕದಲ್ಲಿ ಅತ್ಯುತ್ತಮ ಅಭಿನಯ ನೀಡಿದ ತೃಷಾ ಏಳನೇ ತರಗತಿ ಅವರು “ಅತ್ಯುತ್ತಮ ನಟಿ” ಪ್ರಶಸ್ತಿ ಹಾಗೂ ಹರ್ಷಪ್ರಿಯಾ ಐದನೇ ತರಗತಿ ಅವರು “ಅತ್ಯುತ್ತಮ ಪ್ರದರ್ಶಕಿ ಪ್ರಶಸ್ತಿ” ಪಡೆದುಕೊಂಡು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ನಾಟಕದ ತರಬೇತಿಯನ್ನು ಕಲಾಕೇಂದ್ರದ ಶಿಕ್ಷಕ ಯಶವಂತ್ ನೀಡಿರುತ್ತಾರೆ.
ಶಾಲಾ ಮುಖ್ಯೋಪಾಧ್ಯಾಯರಾದ ಜೋಸೆಫ್ ಪಿ. ಎಂ ಅವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಕ ವೃಂದದ ಪ್ರೋತ್ಸಾಹ ಹಾಗೂ ಸಹಕಾರದೊಂದಿಗೆ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದರು.

Related posts

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!