November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ನಡ: ಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ 2026 – 27 ನೇ ಸಾಲಿನ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.

ನಡ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರೂ ಶಿಕ್ಷಣ ಪ್ರೇಮಿಯೂ ಆದ ಮುನಿರಾಜ ಅಜ್ರಿ ಇವರು ಕ್ರೀಡಾ ಜ್ಯೋತಿಯ ಮೂಲಕ ದೀಪ ಬೆಳಗಿ ಉದ್ಘಾಟಿಸಿ ಉದ್ಘಾಟನಾ ನುಡಿಗಳನ್ನು ಆಡಿದರು. ನಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ವಿ ಜಿ ಇವರು ಕ್ರೀಡಾ ದ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಸ್ವಾಗತಿಸಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಸುಕನ್ಯಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಪವಿತ್ರ ವಂದಿಸಿದರು. ಕ್ರೀಡಾ ಮಾರ್ಗದರ್ಶಿಯಾದ ಶ್ರೀಮತಿ ವಸಂತಿ ಪಿ ಕ್ರೀಡಾ ಪ್ರತಿಜ್ಞ ವಿಧಿ ಬೋಧಿಸಿದರು. ಕ್ರೀಡಾಂಗಣವನ್ನು ಸಜ್ಜುಗೊಳಿಸುವಲ್ಲಿ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಕೀರ್ತನ್ ಸಹಕರಿಸಿದರು. ಕ್ರೀಡೆಗಳ ನಿರ್ವಹಣೆಯಲ್ಲಿ ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!