November 26, 2026
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ; ವೈಜ್ಞಾನಿಕ ದಾಖಲೆಗಳ ಆಧಾರದಲ್ಲೇ ಮರುತನಿಖೆ: ಪ್ರಿಯಾಂಕ್ ಖರ್ಗೆ

ಬೆಳ್ತಂಗಡಿ: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳಬೇಕಾದರೂ ವೈಜ್ಞಾನಿಕ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆಯೇ ತನಿಖೆ ನಡೆಯಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿದ್ದು, ಸತ್ಯಾಂಶವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳು ಅತ್ಯಂತ ಅಗತ್ಯವಾಗಿವೆ. ಹಲವು ಮಂದಿ ಪತ್ರ ಬರೆದು ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಅಂಶಗಳನ್ನು ತಮ್ಮ ಗಮನಕ್ಕೆ ತಂದಿದ್ದು, ಅವುಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ಸ್ವತಃ ತೀರ್ಮಾನಗಳನ್ನು ಮಾಡುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಲಭಿಸುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ. ಇಂತಹ ಸುಳ್ಳು ಸುದ್ದಿಗಳು ಹಾಗೂ ನಿರ್ದಿಷ್ಟ ನಿರೂಪಣೆಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಕೆಲವು ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರು ಇದ್ದಾರೆ. ಆದರೆ ಪ್ರಕರಣದಂತಹ ಸೂಕ್ಷ್ಮ ವಿಚಾರಗಳಲ್ಲಿ ಜವಾಬ್ದಾರಿಯುತ ವರದಿ ಅಗತ್ಯ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.ಸೌಜನ್ಯ ಪ್ರಕರಣದಲ್ಲಿ ಸತ್ಯ ಹೊರಬರಬೇಕು, ಯಾರಿಗೂ ಅನ್ಯಾಯವಾಗಬಾರದು ಎಂಬ ನಿಲುವಿನೊಂದಿಗೆ ವೈಜ್ಞಾನಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya
error: Content is protected !!