November 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿ ಮುಂದೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ.

ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಂಗಳೂರಿನಲ್ಲಿರುವ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ಸಾಕ್ಷ್ಯಗಳು ಹಾಗೂ ಮಾಹಿತಿಗಳನ್ನು ತನಿಖಾ ತಂಡಕ್ಕೆ ಒದಗಿಸುವಂತೆ ಎಸ್‌ಐಟಿ ಸೂಚಿಸಿತ್ತು. ಅದರಂತೆ ತಿಮರೋಡಿ ಅವರು ವಿವಿಧ ದಾಖಲೆ ಪತ್ರಗಳು ಹಾಗೂ ಹಾರ್ಡ್ ಡಿಸ್ಕ್‌ನೊಂದಿಗೆ ಕಚೇರಿಗೆ ಹಾಜರಾಗಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಲ್ಲಿರುವ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡಲಿದ್ದು, ತನಿಖಾ ತಂಡವು ಈ ಮಾಹಿತಿಗಳನ್ನು ಪರಿಶೀಲಿಸಲಿದೆ.ಸೌಜನ್ಯ ಪ್ರಕರಣದ ಮರುತನಿಖೆಯ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಎಸ್‌ಐಟಿ ಕಚೇರಿ ಭೇಟಿ ಕುತೂಹಲ ಮೂಡಿಸಿದೆ.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
error: Content is protected !!