November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂಜಿನಿಯರಿಂಗ್ ಕಲಿಕೆಗೆ ಗಣಿತವೇ ಮೂಲಾಧಾರ* ” – ಡಾ. ಸುಬ್ರಹ್ಮಣ್ಯ ಭಟ್

ಉಜಿರೆ: ಎಂಜಿನಿಯರಿಂಗ್‌ನ ಎಲ್ಲಾ ವಿಭಾಗಗಳಿಗೂ ಗಣಿತಶಾಸ್ತ್ರವು ಮೂಲಭೂತ ಸತ್ವವಾಗಿದೆ. ಗಣಿತವನ್ನು ಆಸಕ್ತಿಯಿಂದ ಕಲಿಯುವುದರಿಂದ ಎಂಜಿನಿಯರಿಂಗ್ ಶಿಕ್ಷಣವು ಅತ್ಯಂತ ಸುಲಭ ವಾಗುತ್ತದೆ ಎಂದು ಉಜಿರೆಯ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ (SDMIT) ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಸುಬ್ರಹ್ಮಣ್ಯ ಭಟ್ ಅಭಿಪ್ರಾಯಪಟ್ಟರು.

ಅವರು ಉಜಿರೆಯ ಎಸ್‌.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನ. 25 ರಂದು ಆಯೋಜಿಸಲಾಗಿದ್ದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಎಂಜಿನಿಯರಿಂಗ್‌ನಲ್ಲಿ ಗಣಿತದ ಅನ್ವಯಗಳು” (Application of Mathematics in Engineering) ಎಂಬ ವಿಷಯದ ಕುರಿತು ಅವರು ಮಾತನಾಡಿದರು.ತಾಂತ್ರಿಕ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಹೊಸ ಆವಿಷ್ಕಾರಗಳನ್ನು ಮಾಡಲು ಗಣಿತದ ಪರಿಕಲ್ಪನೆಗಳು ಹೇಗೆ ಸಹಕಾರಿಯಾಗುತ್ತವೆ ಎಂಬುದನ್ನು ಅವರು ವಿದ್ಯಾರ್ಥಿಗಳಿಗೆ ಸರಳ ಉದಾಹರಣೆಗಳೊಂದಿಗೆ ವಿವರಿಸಿದರು.

ಪದವಿ ಪೂರ್ವ ಹಂತದಲ್ಲಿಯೇ ವಿದ್ಯಾರ್ಥಿಗಳು ಗಣಿತ ವಿಷಯದ ಮೇಲೆ ಹಿಡಿತ ಸಾಧಿಸಿದರೆ, ಮುಂದಿನ ಉನ್ನತ ತಾಂತ್ರಿಕ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮವನ್ನು ಗಣಿತ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಧನಲಕ್ಷ್ಮೀಯವರು ಆಯೋಜಿಸಿದ್ದು, ಉಪನ್ಯಾಸಕರಾದ ಪ್ರಿಯಾ ಅವರು ಕಾರ್ಯಕ್ರಮ ನಿರೂಪಿಸಿದ್ದು, ಉಪನ್ಯಾಸಕ ಶರಣ್ ಅವರು ವಂದಿಸಿದರು.ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ರೋಟರಿ ಕ್ಲಬ್ ಲೊರೆಟೋ ಹಿಲ್ಸ್‌ನಿಂದ ಹಿರಿಯ ನಾಗರಿಕರಿಗೆ ಗೌರವ ಸನ್ಮಾನ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿ–ಶಿಕ್ಷಕರ ಸಮಾಗಮ, ಪ್ರತಿಭಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!