ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ ಎಸ್‌ಡಿಎಂ ಸಂಭ್ರಮ 2026 ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಉಜಿರೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ನಡೆದ ಅಂತರಶಾಲಾ ನಾಟಕ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಕರ್ಣಭಾರಂ’ ನಾಟಕವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಒಟ್ಟು ಹನ್ನೊಂದು ನಾಟಕಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅವುಗಳ ಪೈಕಿ ಕರ್ಣಭಾರಂ ನಾಟಕವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ನಾಟಕದಲ್ಲಿ ಅತ್ಯುತ್ತಮ ಅಭಿನಯ ನೀಡಿದ ತೃಷಾ ಏಳನೇ ತರಗತಿ ಅವರು “ಅತ್ಯುತ್ತಮ ನಟಿ” ಪ್ರಶಸ್ತಿ ಹಾಗೂ ಹರ್ಷಪ್ರಿಯಾ ಐದನೇ ತರಗತಿ ಅವರು “ಅತ್ಯುತ್ತಮ ಪ್ರದರ್ಶಕಿ ಪ್ರಶಸ್ತಿ” ಪಡೆದುಕೊಂಡು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ನಾಟಕದ ತರಬೇತಿಯನ್ನು ಕಲಾಕೇಂದ್ರದ ಶಿಕ್ಷಕ ಯಶವಂತ್ ನೀಡಿರುತ್ತಾರೆ.
ಶಾಲಾ ಮುಖ್ಯೋಪಾಧ್ಯಾಯರಾದ ಜೋಸೆಫ್ ಪಿ. ಎಂ ಅವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಕ ವೃಂದದ ಪ್ರೋತ್ಸಾಹ ಹಾಗೂ ಸಹಕಾರದೊಂದಿಗೆ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದರು.













