ಕಾಜೂರು: ರಾಜ್ಯ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ 800 ವರ್ಷಗಳ ಇತಿಹಾಸ ಹೊಂದಿರುವ ಕಾಜೂರು ದರ್ಗಾ ಶರೀಫ್‌ಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಜೂರು ಜಮಾತ್ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕಾಜೂರು ದರ್ಗಾ ಸರ್ವಧರ್ಮೀಯ ಸೌಹಾರ್ದತೆಗೆ ಹೆಸರಾಗಿದ್ದು, ಸಚಿವರ ಭೇಟಿಯಿಂದ ಭಕ್ತರಲ್ಲಿ ಸಂತಸ ಮೂಡಿದೆ. ವಿಶ್ವ ಶಾಂತಿ ಹಾಗೂ ಸರ್ವರ ಒಳಿತಿಗಾಗಿ ಸಚಿವರು ಪ್ರಾರ್ಥನೆ ಸಲ್ಲಿಸಿದರು.













