November 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪುರಸ್ಕಾರ್ 2026

ಉಜಿರೆ: ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡರೆ ಕಂಡ ಕನಸು ನನಸಾಗುತ್ತದೆ. ಪ್ರತಿಯೊಂದು ವಿಷಯಗಳಲ್ಲೂ ವಿದ್ಯಾರ್ಥಿಗಳ ಭಾಗವಹಿಸುವಿಕೆ ಅತೀ ಮುಖ್ಯ. ನಿಮ್ಮ ಭವಿಷ್ಯವನ್ನು ರೂಪಿಸುವುದು ಅಂಕಗಳಲ್ಲ ,ಅಂಕಗಳು ಜೀವನದ ಮಾನದಂಡ ಅಲ್ಲ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುದು ವಿದ್ಯಾರ್ಥಿ ಜೀವನದ ಅತೀ ಮುಖ್ಯ ಅಂಗ. ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ಜೀವನ ಪ್ರಮುಖ ಕಾಲಘಟ್ಟ. ಎಚ್ಚರಿಕೆಯ ಹೆಜ್ಜೆ ಮುಂದಿನ ಭವಿಷ್ಯಕ್ಕೆ ದಾರಿದೀಪ ಎಂದು ಖ್ಯಾತ ಪತ್ರಿಕೋದ್ಯಮಿ ಹಾಗೂ ಅಂಕಣಕಾರ ರಾಘವ ಶರ್ಮಾ ಕೆ ಹೇಳಿದರು.

ಅವರು ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 27 ರಂದು ಆಯೋಜಿಸಿದ್ದ ಪ್ರಸಕ್ತ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮ ಪುರಸ್ಕಾರ್ 2026 ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸೋಲನ್ನು ಎದುರಿಸುವ ಗಟ್ಟಿತನವನ್ನು ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ಸಣ್ಣ ಸೋಲು ವಿದ್ಯಾರ್ಥಿಯ ಸಾಮರ್ಥ್ಯವನ್ನು ಅಳೆಯುವುದಿಲ್ಲ. ಗುರುಗಳನ್ನು, ಪೋಷಕರನ್ನು ಎಂದಿಗೂ ಮರೆಯಬಾರದು. ವಿದ್ಯಾರ್ಥಿ ಜೀವನದಲ್ಲಿ ಅವರ ಪಾತ್ರ ಬಹಳ ದೊಡ್ಡ. ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಬೇರೆಯವರೊಂದಿಗೆ ನಮ್ಮನ್ನು ಹೋಲಿಸಿಕೊಳ್ಳಬಾರದ.

ನಮ್ಮ ತನವನ್ನು ಅರಿತು ಜೀವನ ನಡೆಸುವುದು ಅತೀ ಅವಶ್ಯಕ ಎಂದು ತಮ್ಮ ಪತ್ರಿಕೋದ್ಯಮ ಜೀವನದ ಅನುಭವಗಳನ್ನು ಹಂಚಿಕೊಳ್ಳುತ್ತಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ ಎಸ್ ಎನ್ ಕಾಕತ್ಕರ್ ಮಾತನಾಡುತ್ತಾ, ಪೋಷಕರನ್ನು ಎಂದಿಗೂ ಮರೆಯಬೇಡಿ. ಮೌಲ್ಯಯುತ ಜೀವನ ವಿದ್ಯಾರ್ಥಿಗಳನ್ನು ಗುರುತಿಸುತ್ತದೆ. ಪಡೆದ ಬಹುಮಾನಕ್ಕೆ ಅರ್ಹರಾಗಿ ಬದುಕಬೇಕು. ತಪ್ಪು ಮಾಡುವುದು ಸಹಜ. ಆಂತರಿಕ ಸೌಂದರ್ಯವನ್ನು ನೀಡುವಂತಹ ಜೀವನ ಸಂಸ್ಕಾರ ಯಶಸ್ವಿ ಜೀವನಕ್ಕೆ ಪ್ರೇರಣೆ. ಬೇರೆಯವರ ಮಾತಿಗೆ ಬೆಲೆ ಕೊಡಬೇಕು ಹಾಗೂ ಆಶಾವಾದಿಗಳಾಗಿ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಮಾತನಾಡಿ, ಪ್ರತಿ ಕ್ಷೇತ್ರದಲ್ಲೂ ಅದರದೇ ಆದಂತಹ ಮೌಲ್ಯ ಇದೆ. ತಮ್ಮ ಪ್ರತಿಭೆಯನ್ನು ಅರಿತು ಯಶಸ್ಸು ಗಳಿಸಿದರೆ ವಿದ್ಯಾರ್ಥಿ ಜೀವನ ಸಾರ್ಥಕ ಎಂದು ಹೇಳಿದರು.ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಜೊತೆಗೆ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ ರಾಜೇಶ್ ಬಿ ಉಪಸ್ಥಿತರಿದ್ದರು. ಕನ್ನಡ ಭಾಷಾ ಉಪನ್ಯಾಸಕರಾದ ಡಾ. ಮಹಾವೀರ ಜೈನ್ ಸ್ವಾಗತಿಸಿ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಸೀಮಾ ಪಿ ವಂದಿಸಿದರು. ವಿದ್ಯಾರ್ಥಿನಿಯರಾದ ಸಿಂಚನ ಹಾಗೂ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya
error: Content is protected !!