November 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2025-26 ನೇ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿವೇತನ ಬಿಡುಗಡೆ ಆಗಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ನಾಲ್ಕು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದಿದ್ದಾರೆ.

ವಿದ್ಯಾರ್ಥಿಗಳಾದ ಅರ್ಪಿತಾ ಅಡಿಗ , ದರ್ಶನ್ ಎನ್ , ಶ್ರೇಯಾ ದಿಲೀಪ್ ಹಾಗೂ ಟಿ.ಪಿ ಹಿತಾ ಇವರಿಗೆ ತಲಾ ಆರು ಸಾವಿರ ರೂ.ಗಳಂತೆ ಒಟ್ಟು ಇಪ್ಪತ್ನಾಲ್ಕು ಸಾವಿರ ರೂ. ವಿದ್ಯಾರ್ಥಿವೇತನವು ಆವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ ಎಂದು ದೆಹಲಿಯ ಸೆಂಟ್ರಲ್ ಸಂಸ್ಕೃತ ಯೂನಿವರ್ಸಿಟಿಯಿಂದ ವರದಿ ಬಂದಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. ಪ್ರಾಚಾರ್ಯ ಪ್ರಮೋದ್ ಕುಮಾರ್ .ಬಿ. ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!