November 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ‌1-2: ಮುಂಡಾಜೆಯಲ್ಲಿ ರಾಜ್ಯಮಟ್ಟದ ಪಪೂ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟ-ಪತ್ರಿಕಾಗೋಷ್ಠಿ

ಮುಂಡಾಜೆ: ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಡಿ.1 ಹಾಗೂ 2ರಂದು ಮುಂಡಾಜೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಜರಗಲಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹೇಳಿದರು.

ಅವರು ಶನಿವಾರ ಉಜಿರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಡಿ‌‌1ರಂದು ಸಂಜೆ 4ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ‌. ಖಾದರ್ಫ ರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಎಸ್. ಬಂಗಾರಪ್ಪ ಉಪಸ್ಥಿತಿಯಲ್ಲಿ ಜರುಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೆ ಮೊದಲು ಸೋಮಂತಡ್ಕ ಪೇಟೆಯಿಂದ ಪಂದ್ಯಾಟ ಜರಗುವ ಮೈದಾನದ ತನಕ ಕ್ರೀಡಾಪಟುಗಳಿಂದ ಜಾಥಾ ನಡೆಯಲಿದೆ

ಡಿ.2ರಂದು ರಾತ್ರಿ 8ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲ ಅಧ್ಯಕ್ಷತೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ವಹಿಸಲಿದ್ದಾರೆ. ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಮಾಜಿ ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕ್ರೀಡಾಕೂಟದಲ್ಲಿ ರಾಜ್ಯದ 33 ಜಿಲ್ಲೆಗಳಿಂದ ತಂಡಗಳು ಭಾಗವಹಿಸಲಿದ್ದು ಒಟ್ಟು 32 ಪಂದ್ಯಗಳು ನಡೆಯಲಿವೆ. 350ಕ್ಕಿಂತ
ಅಧಿಕ ಕ್ರೀಡಾಪಟುಗಳ ಸಹಿತ 3000ಕ್ಕಿಂತ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ಮುಂಡಾಜೆ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಗೀತಾ, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೀಪ್ ಶೆಟ್ಟಿ ಐ. ಉಪಸ್ಥಿತರಿದ್ದರು

Related posts

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya
error: Content is protected !!