November 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಐಟಿಐ ವಿದ್ಯಾರ್ಥಿ ಹಷಿ೯ತ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪಟ್ರಮೆ : ಇಲ್ಲಿನ ದೇವಸಕೋಡಿ ನಿವಾಸಿ ಹರ್ಷಿತ್ (18ವ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ. 27 ರಂದು‌ನಡೆದಿದೆ.ಮೃತ ಹರ್ಷಿತ್ ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ (ITI) ವಿದ್ಯಾಭ್ಯಾಸ ಮಾಡುತ್ತಿದ್ದರು. ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಕುಟುಂಬಸ್ಥರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ವೈದ್ಯರ ನಿರಂತರ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ್ ನ.27ರಂದು ಕೊನೆಯುಸಿರೆಳೆದಿದ್ದಾರೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಚೆಲುವಮ್ಮ ಹಾಗೂ ಸಹೋದರಿ ಪ್ರತೀಕ್ಷಾ ಅವರನ್ನು ಅಗಲಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya
error: Content is protected !!