November 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ನ ವತಿಯಿಂದ ನವೆಂಬರ್ 26ರಂದು ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥವಾಗಿ ಪ್ರತಿವರ್ಷ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಶಾಲೆಯ ಬೆಳಗಿನ ಪ್ರಾರ್ಥನಾ ಸಭೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು (ಪೀಠಿಕೆ) ವಾಚಿಸುವ ಮೂಲಕ ಸಂವಿಧಾನದ ಆಶಯಗಳು, ಮೌಲ್ಯಗಳು ಹಾಗೂ ಮೂಲತತ್ವಗಳನ್ನು ಸ್ಮರಿಸಿದರು. ವಿದ್ಯಾರ್ಥಿಗಳಲ್ಲಿ ಸಂವಿಧಾನದ ಮಹತ್ವ, ಪ್ರಜಾಪ್ರಭುತ್ವದ ಮೌಲ್ಯಗಳು, ನಾಗರಿಕರ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

Related posts

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಅಭಿನಂದನ್ ಹರೀಶ್ ಕುಮಾರ್ ಬೆಂಬಲ: ನ.2ರ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಸಹಕಾರ

Suddi Udaya
error: Content is protected !!