November 29, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಟಿಟಿ ವಾಹನ ಮನೆಗೆ ಡಿಕ್ಕಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಮನೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಚೆಕ್‌ ಪೋಸ್ಟ್ ಬಳಿ ನ.28 ರಂದು ಸಂಜೆ ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ಮನೆಗೂ ಹಾನಿಯಾಗಿದೆ.
ಘಟನೆಯ ಸಮಯದಲ್ಲಿ ಮನೆಯಲ್ಲಿ ಒಬ್ಬರು ಮಾತ್ರ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya
error: Content is protected !!