November 28, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಕಲ್ಪತರು ನರ್ಸಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ–2026ರ ಅಂಗವಾಗಿ ಜ್ಯೋತಿ ಆಸ್ಪತ್ರೆ, ಲಾಯಿಲ ವತಿಯಿಂದ ತಾಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಹಾಗೂ ಕಲ್ಪತರು ಸ್ಕೂಲ್ ಮತ್ತು ಕಾಲೇಜ್ ಆಫ್ ನರ್ಸಿಂಗ್, ಬೆಳ್ತಂಗಡಿ ಇವರ ಸಹಕಾರದೊಂದಿಗೆ ನ.25ರಂದು ಕಲ್ಪತರು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಜ್ಯೋತಿ ಆಸ್ಪತ್ರೆಯ ಸಲಹಾ ಮನೋವೈದ್ಯರಾದ ಡಾ. ಸಿಸ್ಟರ್ ಜೆನ್ನಿಫರ್ ಜೇಕಬ್ ಹಾಗೂ ಕಲ್ಪತರು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 126 ಬಾರಿ ರಕ್ತದಾನ ಮಾಡಿರುವ ದಯಾ ವಿಶೇಷ ಶಾಲೆಯ ಸಂಚಾಲಕರಾದ ರೆವರೆಂಡ್ ಫಾದರ್ ವಿನೋದ್ ಮಸ್ಕರೇನಸ್ ಹಾಗೂ ರಕ್ತದಾನಿಗಳಿಗೆ ರಕ್ತದ ವ್ಯವಸ್ಥೆ ಮಾಡುವ ಮೂಲಕ ಸಮಾಜಸೇವೆ ಸಲ್ಲಿಸುತ್ತಿರುವ ಶ್ರೀ ಸಲೀಂ ಅವರನ್ನು ಸನ್ಮಾನಿಸಲಾಯಿತು.

ನಂತರ ನಡೆದ ರಕ್ತದಾನ ಶಿಬಿರದಲ್ಲಿ ಕಲ್ಪತರು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಜೀವ ಉಳಿಸುವ ಈ ಮಹತ್ಕಾರ್ಯದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಶಿಬಿರದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ತಾಲೂಕು ಆರೋಗ್ಯ ಇಲಾಖೆ, ಕಲ್ಪತರು ಶಿಕ್ಷಣ ಸಂಸ್ಥೆ, ರಕ್ತದಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಜ್ಯೋತಿ ಆಸ್ಪತ್ರೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

Related posts

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya
error: Content is protected !!