November 28, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಸಂಭ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ 2026–27ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವು ನ.27ರಂದು ಸಂಸ್ಥೆಯ ಅನುಗ್ರಹ ಆಡಿಟೋರಿಯಂನಲ್ಲಿ ಸಂಭ್ರಮ ಹಾಗೂ ಸಡಗರದಿಂದ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ವಂ. ಫಾ. ಅಬೆಲ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ನ್ಯಾಯವಾದಿ ಜೋಬಿ ಜಾಯ್ ಭಾಗವಹಿಸಿದ್ದರು.

ಗೌರವ ಅತಿಥಿಗಳಾಗಿ ಸಂಸ್ಥೆಯ ಪ್ರಾಂಶುಪಾಲರಾದ ವಂ.ಫಾ. ಡಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪ್ರವೀಣ್ ವಿಜಯ್ ಡಿಸೋಜ, ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶಶಿಕಿರಣ್ ಜೈನ್, ಶಾಲಾ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾದ ನ್ಯಾಯವಾದಿ ಜೋಬಿ ಜಾಯ್ ಅವರು ತಮ್ಮ ಸಂದೇಶದಲ್ಲಿ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಶಿಕ್ಷಣದ ಜೊತೆಗೆ ಸಾಮಾನ್ಯ ಜ್ಞಾನ, ಜೀವನ ಮೌಲ್ಯಗಳು ಹಾಗೂ ಶಿಸ್ತಿನ ಮಹತ್ವವನ್ನು ತಿಳಿಸಿಕೊಡುವ ಅಗತ್ಯವನ್ನು ಒತ್ತಿಹೇಳಿದರು. ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಉತ್ತಮ ವ್ಯಕ್ತಿತ್ವ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಂತಿರಬೇಕು ಎಂದು ಅಭಿಪ್ರಾಯಪಟ್ಟರು.

ಗೌರವ ಅತಿಥಿಗಳಾದ ಪ್ರವೀಣ್ ವಿಜಯ್ ಡಿಸೋಜ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು. ಸಭಾಧ್ಯಕ್ಷರಾದ ವಂ.ಫಾ. ಅಬೆಲ್ ಲೋಬೊ ಅವರು ವಿದ್ಯಾರ್ಥಿಗಳ ಸಾಧನೆ ಹಾಗೂ ಸಂಸ್ಥೆಯ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಪರಿಶ್ರಮ, ಪ್ರತಿಭೆ ಹಾಗೂ ಸಾಧನೆಗಳಿಗೆ ಪ್ರೋತ್ಸಾಹ ನೀಡುವ ಈ ಗೌರವ ಸಮಾರಂಭದ ವಿಶೇಷ ಆಕರ್ಷಣೆಯಾಗಿತ್ತು.

ಮಧ್ಯಾಹ್ನ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ನೃತ್ಯರೂಪಕಗಳು, ಕಲಾತ್ಮಕ ಪ್ರದರ್ಶನಗಳು ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಿದರು.

ನಾಡಿನ ಸಂಸ್ಕೃತಿ, ಪರಂಪರೆ, ಪರಿಸರ ಪ್ರಜ್ಞೆ ಹಾಗೂ ಸಾಮಾಜಿಕ ಸಂದೇಶಗಳನ್ನು ಒಳಗೊಂಡ ವಿದ್ಯಾರ್ಥಿಗಳ ಪ್ರದರ್ಶನಗಳು ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.

ಶಿಕ್ಷಣದ ಜೊತೆಗೆ ಕಲೆ, ಸಂಸ್ಕೃತಿ, ಕ್ರೀಡೆ, ಶಿಸ್ತು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಮಾನ ಆದ್ಯತೆ ನೀಡುತ್ತಾ ಮುನ್ನಡೆಯುತ್ತಿರುವ ಅನುಗ್ರಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಸಾಧನೆಗಳನ್ನು ಗುರುತಿಸುವ, ಅವರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಹಾಗೂ ಸಂಸ್ಥೆಯ ಶೈಕ್ಷಣಿಕ ಪಯಣವನ್ನು ಸಂಭ್ರಮಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿ ಮೂಡಿಬಂದಿತು.

ಸಹಶಿಕ್ಷಕಿ ವಿನಯ ಲತಾ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಗಗನ್ ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿ ನಾಯಕ ನೀರಜ್ ವಂದಿಸಿದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಪ್ರಾಥಮಿಕ ಶಾಲಾ ಕ್ರೀಡಾಕೂಟ: ಕ್ರೀಡೆಗಳು ದೈಹಿಕ ಕ್ಷಮತೆಯನ್ನು ಒದಗಿಸುತ್ತವೆ: ಸುಮಂತ್ ಕುಮಾರ್ ಜೈನ್ ಬಿ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya
error: Content is protected !!