November 29, 2026
ಗ್ರಾಮಾಂತರ ಸುದ್ದಿ

ಡಿ. 6ರಂದು ಉಜಿರೆಯಲ್ಲಿ ನ್ಯೂ ವೈಬ್ರಂಟ್ ಪ್ರಸನ್ನ ಕಾಲೇಜಿನ ವಿದ್ಯಾರ್ಥಿವೇತನ ಪರೀಕ್ಷೆ

ಉಜಿರೆ, ನ. 27: ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ನ್ಯೂ ವೈಬ್ರಂಟ್ ಪ್ರಸನ್ನ ಕಾಲೇಜು, ಉಜಿರೆ ವತಿಯಿಂದ 2027ನೇ ಸಾಲಿನ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಡಿಸೆಂಬರ್ 6ರಂದು ಪ್ರಸನ್ನ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪರೀಕ್ಷೆಯನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯವನ್ನು ಅಳೆಯಲು ಇದು ಉತ್ತಮ ವೇದಿಕೆಯಾಗಲಿದೆ.

ಪರೀಕ್ಷೆಯಲ್ಲಿ ಒಟ್ಟು 60 ಬಹು ಆಯ್ಕೆ ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೆ ಒಂದು ಅಂಕ ನಿಗದಿಪಡಿಸಲಾಗಿದೆ. ಗಣಿತ ವಿಷಯದಿಂದ 30 ಹಾಗೂ ವಿಜ್ಞಾನ ವಿಷಯದಿಂದ 30 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯ ಅವಧಿ ಒಂದು ಗಂಟೆಯಾಗಿದ್ದು, ಋಣಾತ್ಮಕ ಅಂಕಗಳಿರುವುದಿಲ್ಲ.

ಪರೀಕ್ಷೆಯು ಡಿಸೆಂಬರ್ 6ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9.30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.

ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಮುಂಚಿತವಾಗಿ ಹೆಸರು ನೋಂದಾಯಿಸಲು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದು.

6366385286
6364925011

ನ್ಯೂ ವೈಬ್ರಂಟ್ ಪ್ರಸನ್ನ ಕಾಲೇಜು, ಉಜಿರೆ

Related posts

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!