ಮುಂಡಾಜೆ: ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಡಿ.1 ಹಾಗೂ 2ರಂದು ಮುಂಡಾಜೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಜರಗಲಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹೇಳಿದರು.
ಅವರು ಶನಿವಾರ ಉಜಿರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಡಿ1ರಂದು ಸಂಜೆ 4ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ಫ ರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಎಸ್. ಬಂಗಾರಪ್ಪ ಉಪಸ್ಥಿತಿಯಲ್ಲಿ ಜರುಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.
ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೆ ಮೊದಲು ಸೋಮಂತಡ್ಕ ಪೇಟೆಯಿಂದ ಪಂದ್ಯಾಟ ಜರಗುವ ಮೈದಾನದ ತನಕ ಕ್ರೀಡಾಪಟುಗಳಿಂದ ಜಾಥಾ ನಡೆಯಲಿದೆ
ಡಿ.2ರಂದು ರಾತ್ರಿ 8ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲ ಅಧ್ಯಕ್ಷತೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ವಹಿಸಲಿದ್ದಾರೆ. ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಮಾಜಿ ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ರಾಜ್ಯದ 33 ಜಿಲ್ಲೆಗಳಿಂದ ತಂಡಗಳು ಭಾಗವಹಿಸಲಿದ್ದು ಒಟ್ಟು 32 ಪಂದ್ಯಗಳು ನಡೆಯಲಿವೆ. 350ಕ್ಕಿಂತ
ಅಧಿಕ ಕ್ರೀಡಾಪಟುಗಳ ಸಹಿತ 3000ಕ್ಕಿಂತ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ಮುಂಡಾಜೆ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಗೀತಾ, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೀಪ್ ಶೆಟ್ಟಿ ಐ. ಉಪಸ್ಥಿತರಿದ್ದರು













