November 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಪಿಯು ಕಾಲೇಜಿನಲ್ಲಿ ‘10 PLUS’ ಕಾರ್ಯಾಗಾರ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಸುವರ್ಣಾವಕಾಶ

ಬೆಳ್ತಂಗಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘10 PLUS’ ಒಂದು ದಿನದ ವಿಶೇಷ ಕಾರ್ಯಾಗಾರ ನ.29ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಎಕ್ಸೆಲ್ ಸಂಸ್ಥೆ ಮಹತ್ವದ ಅವಕಾಶಗಳನ್ನು ಕಲ್ಪಿಸುತ್ತಿದೆ. ಎಸ್‌ಎಸ್‌ಎಲ್‌ಸಿ ರಾಜ್ಯ ಪಠ್ಯಕ್ರಮದಲ್ಲಿ 625ಕ್ಕೆ 600 ಅಂಕ (96%) ಗಳಿಸುವ ವಿದ್ಯಾರ್ಥಿಗಳಿಗೆ ಎಕ್ಸೆಲ್‌ ಬೆಳಕು ಯೋಜನೆಯಡಿ ಉಚಿತ ಶಿಕ್ಷಣ ನೀಡಲಾಗುವುದು. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಲಾಗುವುದು ಎಂದು ಘೋಷಿಸಿದರು.

ಇಂದಿನ ಕಾರ್ಯಾಗಾರದಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 13ರಂದು ಮತ್ತೊಂದು ಕಾರ್ಯಾಗಾರ ಆಯೋಜಿಸಲಾಗುವುದು. ಇಂದಿನ ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ದಾಖಲಾತಿ ಸಂದರ್ಭದಲ್ಲಿ ರೂ.5,000 ರಿಯಾಯಿತಿ ನೀಡಲಾಗುವುದು. ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿಶ್ರಾಂತ ಪ್ರಾಂಶುಪಾಲ ಹಾಗೂ ಜೆಸಿಐ ರಾಷ್ಟ್ರೀಯ ತರಬೇತುದಾರ ಪ್ರೊ. ಬಿ.ವಿ. ಸೂರ್ಯನಾರಾಯಣ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಎಕ್ಸೆಲ್ ವಿದ್ಯಾಸಂಸ್ಥೆಯ ಕೊಡುಗೆ ಮಹತ್ವದ್ದಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಎಕ್ಸೆಲ್ ಸಂಸ್ಥೆ ನಾಡಿನ ಶ್ರೇಷ್ಠ ವಿದ್ಯಾಸಂಸ್ಥೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪಿಯುಸಿ ಶಿಕ್ಷಣದ ಆಯ್ಕೆಗಳು, ನೀಟ್, ಜೆಇಇ, ಎನ್‌ಡಿಎ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಪರೀಕ್ಷಾ ತಂತ್ರಗಾರಿಕೆ ಮತ್ತು ಮುಂದಿನ ಶೈಕ್ಷಣಿಕ ಅವಕಾಶಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಚಲನಚಿತ್ರ ನಿರ್ದೇಶಕ ಹಾಗೂ ಭಾಷಣಕಾರ ಸ್ಮಿತೇಶ್ ಎಸ್ ಬಾರ್ಯ, ಪೈ ಅಕಾಡೆಮಿಯ ಚೈತ್ರ ಎಸ್. ಪೈ, ಎಕ್ಸೆಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಹಾಗೂ ಡಾ. ಪ್ರಜ್ವಲ್ ಕಜೆ ಉಪಸ್ಥಿತರಿದ್ದರು. ಸಂಪನ್ಮೂಲ ಉಪನ್ಯಾಸಕರಾಗಿ ಶ್ರೀನಿಧಿ ರಾಜ್ ಶೆಟ್ಟಿ, ಸತ್ಯನಾರಾಯಣ ಭಟ್, ಜೋಸ್ಟಮ್ ಎ.ಟಿ., ಪ್ರವೀಣ್ ಪಾಟೀಲ್ ಹಾಗೂ ಸಂತೋಷ್ ಕೆ.ಕೆ. ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ 500ಕ್ಕೂ ಹೆಚ್ವಿನ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡೆದುಕೊಂಡರು.

Related posts

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ನಾರಾವಿ ಬ್ರಹ್ಮಬೈದರ್ಕಳ ಗರಡಿ, ಶ್ರೀ ಕೊಡಮಣಿತ್ತಾಯಿ ದೈವಸ್ಥಾನದ ಶಿಲಾನ್ಯಾಸ

Suddi Udaya
error: Content is protected !!