25.7 C
ಪುತ್ತೂರು, ಬೆಳ್ತಂಗಡಿ
September 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ಜಿನ್ನಪ್ಪ ಪೂಜಾರಿ ಹೊಸವಕ್ಲು ನಿಧನ

Suddi Udaya
ವೇಣೂರು: ಮೂಡುಕೋಡಿ ಹೊಸವಕ್ಲು ಶ್ರೀವರ ನಿವಾಸಿ ಜಿನ್ನಪ್ಪ ಪೂಜಾರಿ (67ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ವಸಂತಿ, ಮಕ್ಕಳಾದ ಪುರುಷೋತ್ತಮ, ಪೂರ್ಣಿಮ, ನಮಿತಾ, ರಾಜೇಶ್, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸಹಕಾರಿಯಿಂದ ಸಮೃದ್ಧಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಎಂಬ ಸದುದ್ದೇಶದೊಂದಿಗೆ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಕಚ್ಚಾರಸ್ತೆಗಳ ದುರಸ್ತಿ ಕಾರ್ಯ ಕೈಗೊಂಡಿದೆ. ಸೊಸೈಟಿ ಅಧ್ಯಕ್ಷ ಜೋಯೇಲ್...
ಗ್ರಾಮಾಂತರ ಸುದ್ದಿಬೆಳ್ತಂಗಡಿಸಮಸ್ಯೆ

ಕೋಳಿ ಸಾಕಾಣಿಕೆ ರೈತರಿಗೆ ಕಂಪನಿಗಳು ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯ: ಪ್ರಕಾಶ್ ಗೌಡ

Suddi Udaya
ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರ ರೈತರ ಸಮಸ್ಯೆಗಳಿಗೆ ಕಂಪನಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ ಗೌಡ ರಾಮಕುಂಜ ಎಚ್ಚರಿಸಿದರು. ಅವರು ಆ. 24ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಉದ್ಯೋಗಾವಕಾಶ ಸೆ.1ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
ಬೆಳ್ತಂಗಡಿ: ತಾಲೂಕಿನ ವೇಣೂರು–ಕೊಕ್ಕಡ ಕೇಂದ್ರದ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮೋಹನ್ ಗೌಡ ಕಲ್ಮಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. SSLC/PUC ಉತ್ತೀರ್ಣರಾದ 25ರಿಂದ 40 ವರ್ಷದೊಳಗಿನವರಿಗೆ ತಿಂಗಳಿಗೆ ರೂ.25,000ರಿಂದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ದೇಗುಲ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು. ಗೌರವ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಕೆ, ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸರಕಾರಿ ವೈದ್ಯಾಧಿಕಾರಿಗಳು ಭೇಟಿ

Suddi Udaya
ಉಜಿರೆ: ಇಲ್ಲಿಯ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯಾಧಿಕಾರಿ ಸಂಜತ್ ವೈದ್ಯ ಅಧಿಕಾರಿ ಡಾ. ವೆಂಕಟಸ್ವಾಮಿ ( ಸ್ತ್ರೀ ರೋಗ ತಜ್ಞರು) ಹಾಗೂ ಡಾ.ರಾಘವೇಂದ್ರ ಶಸ್ತ್ರಚಿಕಿತ್ಸೆ ತಜ್ಞರು ಭೇಟಿ ನೀಡಿದರು. ಸ್ತ್ರೀ ರೋಗ ತಜ್ಞರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya
ಧರ್ಮಸ್ಥಳ ಗ್ರಾಮದ ಪಾಂಗಳ ಕು. ಸೌಜನ್ಯ ರವರ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ರವರು ಆ.26ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಬಾಲಕೃಷ್ಣ ಗೌಡ ಬೀರ್ಮೊಟ್ಟು, ಪುರಂದರ, ಮೋಹನ್...
Uncategorized

ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿ-ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧರಾದ ಸುಬೇದಾ‌ರ್ ಮೇಜರ್ ಶಿವಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿದರು....
ಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya
ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,“ಕೆಸರ್‌ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಮತ್ತು ನಮ್ಮ ಪರಂಪರಾಗತ ಕ್ರೀಡೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಣ್ಣಿನೊಂದಿಗೆ ಮನುಷ್ಯನಿಗಿರುವ ಅವಿನಾಭಾವ ಸಂಬಂಧವನ್ನು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಯುವಜನರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು. ಕೆಸರುಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಕೆಸರಿನಲ್ಲಿ ಆಟವಾಡುತ್ತಾ ಸ್ಪರ್ಧಿಗಳು ಪ್ರದರ್ಶಿಸಿದ ಉತ್ಸಾಹ, ಚುರುಕುತನ ಮತ್ತು ಕ್ರೀಡಾಸ್ಫೂರ್ತಿ ನೆರೆದಿದ್ದವರನ್ನು ರಂಜಿಸಿತು. ಗ್ರಾಮೀಣ ಕ್ರೀಡೆಗಳ ಮೂಲಕ ಹಳೆಯ ಕಾಲದ ಕೃಷಿ ಬದುಕು ಮತ್ತು ಜನಪದ ಸಂಸ್ಕೃತಿಯನ್ನು ನೆನಪಿಸುವುದರ ಜೊತೆಗೆ, ಪರಸ್ಪರ ಬಾಂಧವ್ಯ ಹಾಗೂ ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿಯೂ ಕಾರ್ಯಕ್ರಮ ಮೂಡಿಬಂತು. ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್,  ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಮುರಳೀಧರ ದಾಸ್, ಹರ್ಷತ್ ಜೈನ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ವಿಚಾರ ವಿನಿಮಯ

Suddi Udaya
ಬೆಳ್ತಂಗಡಿ:ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ಸ್ವತಂತ್ರ ಭಾರತದ 80 ವರ್ಷಗಳ ವಿಚಾರವಾಗಿ ಭಾರತದ ಬಹುತ್ವ ‌ ಮತ್ತು ಬಂಧುತ್ವ ಎಂಬ ಶೀರ್ಷಿಕೆಯಲ್ಲಿ ವಿಚಾರ ವಿನಿಮಯ ಕೂಟವು ಬೆಳ್ತಂಗಡಿ ಜಂಇಯತ್ತುಲ್ ಫಲಾಹ್...
error: Content is protected !!