ಸಿಯೋನ್ ಆಶ್ರಮ: ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ
ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್...
