ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಪ್ರಯುಕ್ತ ಮೇ 25ರಂದು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಉತ್ಸವಮೂರ್ತಿಯ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ವಿಧಿವಿಧಾನಗಳೊಂದಿಗೆ ಉತ್ಸವಮೂರ್ತಿಯು ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಸೇವೆಗಳು ಮತ್ತು ಉತ್ಸವಗಳು ಸಮಾಪ್ತಿಗೊಂಡವು. ಕಾರ್ತಿಕ ಮಾಸದ ದೀಪೋತ್ಸವದೊಂದಿಗೆ ಎಂದಿನಂತೆ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಪುನರಾರಂಭಗೊಳ್ಳಲಿವೆ. ಸೋಮವಾರದ ಕಾರಣ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಊರುಪರಊರುಗಳಿಂದ ಆಗಮಿಸಿದ ಸಾವಿರಾರು ಭಕ್ತರು ಉತ್ಸವಗಳಲ್ಲಿ ಪಾಲ್ಗೊಂಡರು. ಯಕ್ಷಗಾನ ಮೇಳದ...
