ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಜೂ. 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.30ರಿಂದ ಸುಮಾರು ಅರ್ಧ ಗಂಟೆಗಳ ಕಾಲ ವಿದ್ಯಾರ್ಥಿಗಳು...
