ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ, ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ. ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ...
